ಅನಂತ್‌ನಾಗ್ ನಲ್ಲಿ ಮುಂದುವರೆದ ಗುಂಡಿನ ಚಕಮಕಿ: ಭಾರತೀಯ ಯೋಧ ನಾಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಕಾಳಗ ಮುಂದುವರೆದಿದೆ. ಭಾರತೀಯ ಸೇನೆಯ ಒಬ್ಬ ಯೋಧ ಇನ್ನೂ ನಾಪತ್ತೆಯಾಗಿದ್ದು, ಹುಡುಕಾಟ ಮುಂದುವರೆದಿದೆ.

ಅನಂತ್‌ನಾಗ್ ಜಿಲ್ಲೆಯ ಗುಡೋಲೆ ದಟ್ಟ ಅರಣ್ಯ ಪ್ರದೇಶದಲ್ಲಿ ಲಷ್ಕರ್-ಏ-ತೋಯ್ಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಅಡಗಿದ್ದಾರೆ ಎಂದು ಸೇನಾ ಅಧಿಕಾರುಗಳು ಮಾಹಿತಿ ನೀಡಿದ್ದಾರೆ. ಭದ್ರತಾ ಪಡೆಗಳು ಮಂಗಳವಾರದಿಂದ ಅವರ ಜೊತೆ ಗುಂಡಿನ ಚಕಮಕಿ ನಡೆಸುತ್ತಿದೆ.

ಇನ್ನು ಎನ್​ಕೌಂಟರ್​ನಲ್ಲಿಇಂದು(ಸೆ.15) ಓರ್ವ ಯೋಧ ಹುತಾತ್ಮರಾಗಿದ್ದಾರೆ. ಯೋಧರ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಭಾರತೀಯ ಸೇನೆ ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್‌ ದೋನಕ್ ಮತ್ತು ಡಿವೈಎಸ್‌ಪಿ ಹುಮಾಯಾನ್ ಭಟ್ ಹುತಾತ್ಮರಾಗಿದ್ದರು.

Sneha Gowda

Recent Posts

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

2 mins ago

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು?

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…

3 mins ago

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

16 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

44 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

49 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

1 hour ago