News Karnataka Kannada
Sunday, May 05 2024
ಜಮ್ಮು-ಕಾಶ್ಮೀರ

ಜಮ್ಮು: ಜಮ್ಮುವಿನಲ್ಲಿ ಗುಂಡಿನ ದಾಳಿ, ಪಾಕ್ ಕೈದಿ ಸಾವು

ಪ್ರೀತಿಸಿದವರೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.
Photo Credit : IANS

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಜಮ್ಮು ಜಿಲ್ಲೆಯಲ್ಲಿ ಬುಧವಾರ ಸಂಜೆ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಪೇದೆಯೊಬ್ಬರು ಗಾಯಗೊಂಡಿದ್ದು, ಪಾಕಿಸ್ತಾನದ ಕೈದಿಯೊಬ್ಬರು ಸಾವನ್ನಪ್ಪಿದ್ದಾರೆ.

ತೋಫ್ ಗ್ರಾಮದ ಅಂತರಾಷ್ಟ್ರೀಯ ಗಡಿ ಬಳಿಯ ಅರ್ನಿಯಾ ಸೆಕ್ಟರ್ನಲ್ಲಿ ಪೊಲೀಸರು ಶಸ್ತ್ರಾಸ್ತ್ರ ಪಡೆಯ ಕಾರ್ಯಾಚರಣೆಯಲ್ಲಿ ಒಬ್ಬ ಪೊಲೀಸ್ ಕಾನ್ಸ್ಟೇಬಲ್ ಮತ್ತು ಲಷ್ಕರ್-ಎ-ತೊಯ್ಬಾ ಕಮಾಂಡರ್ ಮೊಹಮ್ಮದ್ ಅಲಿ ಹುಸೇನ್ ಅಲಿಯಾಸ್ ಖಾಸಿಂ / ಜಹಾಂಗೀರ್ ಗಾಯಗೊಂಡಿದ್ದಾರೆ. ಇಬ್ಬರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಎಂದು ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನದ ಕೈದಿ ಮುಹಮ್ಮದ್ ಅಲಿ ಹುಸೇನ್ ಲಷ್ಕರ್ ಇ ತೋಯ್ಬಾದ ಕಮಾಂಡರ್ ಆಗಿರುವುದರಿಂದ ಡ್ರೋನ್ ಶಸ್ತ್ರಾಸ್ತ್ರಗಳನ್ನು ಬೀಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದನು. ಅರ್ನಿಯಾ ಶಸ್ತ್ರಾಸ್ತ್ರಗಳನ್ನು ಬೀಳಿಸುವಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡಿದ್ದ  ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಂತರರಾಷ್ಟ್ರೀಯ ಗಡಿಯ ಬಳಿಯ ಅರ್ನಿಯಾದ ಟೋಫ್ ಗ್ರಾಮದ  ಸ್ಥಳದಲ್ಲಿ ಒಂದು ಪ್ಯಾಕೆಟ್ ಅನ್ನು ಹೂಳಲಾಗಿತ್ತು. ಪ್ಯಾಕೆಟ್ ಅನ್ನು ತೆರೆಯುತ್ತಿದ್ದಾಗ, ಪಾಕಿಸ್ತಾನಿ ಕೈದಿ ಪೊಲೀಸರಲ್ಲಿ ಒಬ್ಬರ ರೈಫಲ್ ಕಸಿದುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಿದ ನಂತರ ಪರಾರಿಯಾಗಲು ಪ್ರಯತ್ನಿಸಿದನು, ಇದರಿಂದ ಪೊಲೀಸ್ ಕಾನ್ಸ್ಟೇಬಲ್ಗೆ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ.

ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಪೊಟ್ಟಣವನ್ನು ಬಾಂಬ್ ನಿಷ್ಕ್ರಿಯ ದಳವು ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು