ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬುಧವಾರ ಸಂಜೆ ನಡೆದ ನಿಗೂಢ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಉಧಂಪುರದ ದೊಮೈಲ್ ಚೌಕ್ ನಲ್ಲಿ ನಿಲ್ಲಿಸಿದ್ದ ಬಸ್ ನಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
“ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಉಧಂಪುರದಲ್ಲಿ ನಡೆದ ಎರಡನೇ ಸ್ಫೋಟ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಬಸ್ ಅನ್ನು ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಲಾಗಿತ್ತು ಮತ್ತು ಸ್ಫೋಟದ ಸಮಯದಲ್ಲಿ ಖಾಲಿಯಾಗಿತ್ತು. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಬಸ್ಸಿನ ಮೇಲ್ಛಾವಣಿಗೆ ಹಾನಿಯಾಗಿದ್ದು, ಹತ್ತಿರದ ಹಲವಾರು ವಾಹನಗಳ ಕಿಟಕಿ ಗಾಜುಗಳು ಸಹ ಹಾನಿಗೀಡಾಗಿವೆ.
ಸ್ಫೋಟದ ಬಗ್ಗೆ ಮಾಹಿತಿ ಪಡೆದ ನಂತರ ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ತಲುಪಿತು.
ಈ ಘಟನೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.