News Karnataka Kannada
Monday, April 29 2024
ಜಮ್ಮು-ಕಾಶ್ಮೀರ

ಜಮ್ಮು: ರಜೌರಿ ಜಿಲ್ಲೆಯ ಸೇನಾ ನೆಲೆಯ ಮೇಲೆ ಗುಂಡಿನ ದಾಳಿ, ಇಬ್ಬರು ಸೈನಿಕರ ಸಾವು

Anantnag encounter continues for fourth day, drones used to track down terrorists
Photo Credit : Wikimedia

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾ ನೆಲೆಯ ಮೇಲೆ ಗುರುವಾರ ನಡೆದ ದಾಳಿಯಲ್ಲಿ ಕನಿಷ್ಠ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಐವರು ಸೈನಿಕರು ಗಾಯಗೊಂಡಿದ್ದಾರೆ.

“ಪರ್ಗಲ್ ರಜೌರಿಯಲ್ಲಿ ಕತ್ತಲೆಯಲ್ಲಿ   ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಜಾಗೃತ ಪಡೆಗಳು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಿದೆ.  ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ತಡೆಯಲಾಗಿದೆ. ಈ ಚಕಮಕಿಯಲ್ಲಿ  ಐವರು ಸೈನಿಕರಿಗೂ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೇನೆ ಟ್ವೀಟ್ ಮಾಡಿದೆ.

ಭಾರಿ ಶಸ್ತ್ರಸಜ್ಜಿತ ಇಬ್ಬರು ಭಯೋತ್ಪಾದಕರು ಸೇನಾ ಶಿಬಿರಕ್ಕೆ ನುಗ್ಗಲು ಪ್ರಯತ್ನಿಸಿದ ನಂತರ ಗುಂಡಿನ ಚಕಮಕಿ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಗುಂಡಿನ ಚಕಮಕಿಯಲ್ಲಿ, ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು.

ಈಗ ಗುಂಡಿನ ಚಕಮಕಿ ನಿಂತಿದೆ ಆದರೆ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು