News Karnataka Kannada
Wednesday, April 17 2024
Cricket
ಜಮ್ಮು-ಕಾಶ್ಮೀರ

32 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ₹32 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
Photo Credit : News Kannada

ಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ₹32 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

ಜಮ್ಮುವಿನ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾದ ಮೋದಿ ಅವರನ್ನು ಜಮ್ಮು ಮತ್ತು ಕಾಶ್ಮೀರ ಲೆಪ್ಟಿನೆಂಟ್‌ ಗವರ್ನರ್‌ ಮನೋಜ್ ಸಿನ್ಹಾ ಅವರು ಸನ್ಮಾನಿಸಿದರು.

ಆರೋಗ್ಯ, ಶಿಕ್ಷಣ, ರೈಲು, ರಸ್ತೆ, ವಿಮಾನಯಾನ, ಪೆಟ್ರೋಲಿಯಂ, ನಾಗರಿಕ ಮೂಲಸೌಕರ್ಯ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳಿಗೆ ಮೋದಿ ಅವರು ಚಾಲನೆ ನೀಡಿದ್ದಾರೆ. ಇದೇ ವೇಳೆ ಕಣಿವೆ ರಾಜ್ಯದಲ್ಲಿ ಮೊದಲ ಎಲೆಕ್ಟ್ರಿಕ್ ರೈಲು ಸಂಚಾರಕ್ಕೆ ಮತ್ತು ಸಂಗಲದಾನ್‌ -ಬಾರಾಮುಲ್ಲಾ ನಿಲ್ದಾಣದ ನಡುವಿನ ರೈಲು ಸೇವೆಗೆ ಹಸಿರು ನಿಶಾನೆ ತೋರಿದರು.

ಕಾರ್ಯಕ್ರಮದಲ್ಲಿ, ಸರ್ಕಾರಿ ಸೇವೆಗೆ ನೇಮಕಾತಿಯಾದ ಸುಮಾರು 1,500 ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಆದೇಶ ವಿತರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು