ಶ್ರೀನಗರ: ಸೋಮವಾರ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಬ್ದುಲ್ ರಜಾಕ್ ಉಗ್ರರ ಗುಂಡಿಗೆ ಬಲಿಯಾದ ವ್ಯಕ್ತಿ.
ಥಾನಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಾ ಟಾಪ್ ಎಂಬ ಹಳ್ಳಿಯ ಮಸೀದಿಯಲ್ಲಿ ಸಂಜೆಯ ನಮಾಜ್ ಮುಗಿಸಿ ಹೊರಗೆ ಬಂದಾಗ ಅಬ್ದುಲ್ ರಜಾಕ್ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ.
ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ರಜಾಕ್ ಕೊನೆಯುಸಿರೆಳೆದಿದ್ದಾರೆ.
ಭಯೋತ್ಪಾದಕರು ಸಮೀಪದಿಂದ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರನ್ನು ಪತ್ತೆಹಚ್ಚಲು ಬೃಹತ್ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.