ರಜೌರಿಯಲ್ಲಿ ಉಗ್ರರ ಗುಂಡಿನ ದಾಳಿಗೆ ಓರ್ವ ಬಲಿ

ಶ್ರೀನಗರ: ಸೋಮವಾರ ಜಮ್ಮು ಮತ್ತು ಕಾಶ್ಮೀರದ ರಜೌರಿ  ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಬ್ದುಲ್ ರಜಾಕ್ ಉಗ್ರರ ಗುಂಡಿಗೆ ಬಲಿಯಾದ ವ್ಯಕ್ತಿ.

ಥಾನಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಾ ಟಾಪ್ ಎಂಬ ಹಳ್ಳಿಯ ಮಸೀದಿಯಲ್ಲಿ ಸಂಜೆಯ ನಮಾಜ್ ಮುಗಿಸಿ ಹೊರಗೆ ಬಂದಾಗ ಅಬ್ದುಲ್ ರಜಾಕ್ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ.

ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ರಜಾಕ್ ಕೊನೆಯುಸಿರೆಳೆದಿದ್ದಾರೆ.

ಭಯೋತ್ಪಾದಕರು ಸಮೀಪದಿಂದ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರನ್ನು ಪತ್ತೆಹಚ್ಚಲು ಬೃಹತ್ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

Ashika S

Recent Posts

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

14 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

33 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

34 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

49 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

52 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

1 hour ago