News Karnataka Kannada
Thursday, May 02 2024
ಜಮ್ಮು-ಕಾಶ್ಮೀರ

ಪುಲ್ವಾಮಾ ಪದಗಂಪುರದಲ್ಲಿ ಓರ್ವ ಭಯೋತ್ಪಾದಕನ ಹತ್ಯೆ

One terrorist killed in Pulwama's Padgampur
Photo Credit : IANS

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪದಗಂಪುರ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. “ಓರ್ವ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಎನ್ಕೌಂಟರ್ ಪ್ರಗತಿಯಲ್ಲಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಆ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು.

ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದ ನಂತರ, ಅಲ್ಲಿ ಅಡಗಿದ್ದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದರು. ನಂತರ ಕಾರ್ಯಾಚರಣೆ ನಡೆಯಿತು.

ಇತ್ತೀಚಿನ ದಿನಗಳಲ್ಲಿ ಕಾಶ್ಮೀರದಾದ್ಯಂತ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸರಣಿ ಎನ್‌ಕೌಂಟರ್‌ಗಳು ನಡೆದಿದ್ದು, ಇದರಲ್ಲಿ ಅನೇಕ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು