News Karnataka Kannada
Thursday, May 02 2024
ಜಮ್ಮು-ಕಾಶ್ಮೀರ

ಶ್ರೀನಗರದಲ್ಲಿ 6400 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೊದಲ ಬಾರಿಗೆ ಶ್ರೀನಗರಕ್ಕೆ ಆಗಮಿಸಿದ್ದಾರೆ.
Photo Credit : News Kannada

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೊದಲ ಬಾರಿಗೆ ಶ್ರೀನಗರಕ್ಕೆ ಆಗಮಿಸಿದ್ದಾರೆ.

ಅವರು ಬಕ್ಷಿ ಕ್ರೀಡಾಂಗಣದಲ್ಲಿ ‘ವಿಕಸಿತ ಭಾರತ, ವಿಕಸಿತ ಜಮ್ಮು ಕಾಶ್ಮೀರ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಕೃಷಿ-ಆರ್ಥಿಕತೆಯನ್ನು ಹೆಚ್ಚಿಸಲು ಸುಮಾರು 6.400 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

ಶ್ರೀನಗರದ ‘ಹಜರತ್‌ಬಾಲ್ ದೇಗುಲದ ಸಮಗ್ರ ಅಭಿವೃದ್ಧಿ’ ಸೇರಿದಂತೆ ಪ್ರವಾಸೋದ್ಯಮ ವಲಯದಲ್ಲಿ 1,400 ಕೋಟಿಗೂ ಹೆಚ್ಚು ಮೊತ್ತದ ಯೋಜನೆಗಳನ್ನು ಪ್ರಧಾನಿ ಚಾಲನೆ ನೀಡಿದರು. ಪ್ರವಾಸೋದ್ಯಮದಲ್ಲಿ ರಾಷ್ಟ್ರದ ನಾಡಿಮಿಡಿತವನ್ನು ಗುರುತಿಸುವ ಮೊದಲ ರಾಷ್ಟ್ರವ್ಯಾಪಿ ಉಪಕ್ರಮ ದೇಖೋ ಅಪ್ನಾ ದೇಶ್ ಪೀಪಲ್ಸ್ ಚಾಯ್ಸ್ ಟೂರಿಸ್ಟ್ ಡೆಸ್ಟಿನೇಶನ್ ಪೋಲ್’ ಮತ್ತು ಭಾರತಕ್ಕೆ ಪ್ರವಾಸೋದ್ಯಮವನ್ನು ಉತ್ತೇಜಿಸಲು ಭಾರತೀಯ ಡಯಾಸ್ಪೊರಾವನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿರುವ ಚಲೋ ಇಂಡಿಯಾ ಗ್ಲೋಬಲ್ ಡಯಾಸ್ಪೊರಾ ಅಭಿಯಾನ’ಗಳು ಸಹ ಉದ್ಘಾಟನೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು