ಶ್ರೀನಗರ: ಎರಡು ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ 17ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಮಂಗಿ ದೇವಿ (36), 13 ವರ್ಷದ ಬಾಲಕಿ ತಾನಿಯಾ ಹಾಗೂ ಕಸ್ತೂರಿ ಲಾಲ್ (58) ಎಂದು ಗುರ್ತಿಸಲಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. .