ಶ್ರೀನಗರ, ಆ.31: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ನಲ್ಲಿ ಬುಧವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಪಡೆಗಳ ಜಂಟಿ ತಂಡವು ಆ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು. ಈ ಸಮಯದಲ್ಲಿ, ಅಲ್ಲಿ ಅಡಗಿದ್ದ ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು. ಪ್ರತಿಯಾಗಿ ಭದ್ರತಾ ಪಡೆ ನಡೆಸಿದ ದಾಳಿಗೆ ಓರ್ವ ಹತ್ಯೆಯಾಗಿದ್ದಾನೆ.
ಮಂಗಳವಾರ, ಶೋಪಿಯಾನ್ ಜಿಲ್ಲೆಯ ನಾಗ್ಬಲ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಮೂವರು ಎಲ್ಇಟಿ ಭಯೋತ್ಪಾದಕರನ್ನು ಕೊಲ್ಲಲಾಗಿದೆ.