ಜಮ್ಮುಕಾಶ್ಮೀರ: ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಬಲಿ ಆಗಿದ್ದಾನೆ. ಜಮ್ಮು ಕಾಶ್ಮೀರದ ರಜೌರಿಯಲ್ಲಿ ಎನ್ ಕೌಂಟರ್ ನಡೆದಿದ್ದು, ಗಡಿನುಸುಳುತ್ತಿದ್ದ ಉಗ್ರನೊಬ್ಬನನ್ನು ಭಾರತೀಯ ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಓರ್ವ ಉಗ್ರ ಇಂದು ಗಡಿ ನುಸುಳುವ ಯತ್ನ ನಡೆಸಿದ್ದು, ಈ ಸಂದರ್ಭದಲ್ಲಿ ಉಗ್ರನನ್ನು ಭದ್ರತಾ ಪಡೆಯು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಿದ್ದಾರೆ ಎಂದು ತಿಳಿದು ಬಂದಿದೆ.