ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್ಕೌಂಟರ್ನಲ್ಲಿ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.
ಹಾಲನ್ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಶುಕ್ರವಾರ ಸಂಜೆ ಎನ್ಕೌಂಟರ್ ಆರಂಭಿಸಿದ್ದು, ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರ ಗುಂಡಿನ ದಾಳಿಯಿಂದ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದರು. ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿಯತ್ತಿದೆ ಎಂದು ಸೇನೆಯ 15 ಕಾರ್ಪ್ಸ್ ಟ್ವೀಟ್ನಲ್ಲಿ ತಿಳಿಸಿದೆ.