ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ.
ರಾಜೌರಿಯ ಕೇವಲ್ ತಿರುವಿನಲ್ಲಿ ಮಿನಿಬಸ್ ಚಾಲಕನ ನಿಯಂತ್ರಣ ತಪ್ಪಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಪಘಾತದಲ್ಲಿ ಗಾಯಗೊಂಡ 14 ಜನರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, 12 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.