ಶ್ರೀನಗರ: ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಟಿ, ಟಿಆರ್ಎಫ್ನೊಂದಿಗೆ ಸಂಬಂಧ ಹೊಂದಿರುವ ಇಬ್ಬರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭದ್ರತಾ ಪಡೆಗಳ ಸಹಕಾರದೊಂದಿಗೆ ಬಂಧಿಸಿದೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಯೋತ್ಪಾದಕರನ್ನು ಬಂಧಿಸಿದ್ದು, ಅವರ ವಶದಲ್ಲಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜನಬಾಜ್ಪೋರಾ ಬಾರಾಮುಲ್ಲಾ ನಿವಾಸಿ ಯಾಸೀನ್ ಅಹ್ಮದ್ ಶಾ ಎಂಬ ವ್ಯಕ್ತಿ ತನ್ನ ಮನೆಯಿಂದ ನಾಪತ್ತೆಯಾಗಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಟಿ/ಟಿಆರ್ಎಫ್ಗೆ ಸೇರ್ಪಡೆಗೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ವಶದಿಂದ ಒಂದು ಪಿಸ್ತೂಲ್, ಒಂದು ಪಿಸ್ತೂಲ್ ಮ್ಯಾಗಜೀನ್ ಮತ್ತು ಎಂಟು ಲೈವ್ ಗುಂಡುಗಳು ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಯಾಸೀನ್ ಅಹ್ಮದ್ ಶಾ ವಿಚಾರಣೆಯ ಸಮಯದಲ್ಲಿ ಟಾಕಿಯಾ ವಾಗೂರಾ ನಿವಾಸಿ ಪರ್ವೈಜ್ ಅಹ್ಮದ್ ಶಾ ಎಂಬಾತನ ಜತೆಗೂಡಿ ಭಯೋತ್ಪಾದನಾ ಕೃತ್ಯ ನಡೆಸುತ್ತಿರುವುದಾಗಿ ತಿಳಿಸಿದ್ದು, ಆತನ ಮನೆಯ ಮೇಲೆ ದಾಳಿ ಮಾಡಿ ಅಹ್ಮದ್ ನನ್ನು ಕೂಡ ಬಂಧಿಸಿವೆ. ಆತನ ವಶದಲ್ಲಿದ್ದ ಎರಡು ಹ್ಯಾಂಡ್ ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಇಬ್ಬರು ಭಯೋತ್ಪಾದಕರು ಪಾಕಿಸ್ತಾನ ಮೂಲದ ಹ್ಯಾಂಡ್ಲರ್ಗಳ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸುತ್ತಿದ್ದು ಬಾರಾಮುಲ್ಲಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಯೋಜಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.