Categories: ದೇಶ

ತಂಗಿ ಬಗ್ಗೆ ಅಸೂಯೆ: ಬುರ್ಖಾ ಧರಿಸಿ ಬಂದು ಆಭರಣಗಳ ಕದ್ದ ಅಕ್ಕ

ನವದೆಹಲಿ: ಒಡಹುಟ್ಟಿದ ತಂಗಿ ಬಗ್ಗೆ ಅಸೂಯೆ ಪಟ್ಟ ಸಹೋದರಿಯೊಬ್ಬಳು ಆಕೆಯ ಮದುವೆಗೆಂದು ಸಂಗ್ರಹಿಸಿಟ್ಟಿದ್ದ ಚಿನ್ನಾಭರಣ ಹಾಗೂ ಹಣವನ್ನು ದೋಚಿರುವ ಘಟನೆಯೊಂದು ರಾಷ್ಟ್ರ ರಾಜಧಾನಿ ದೆಹಲಿಯ ಉತ್ತಮ್ ನಗರದಲ್ಲಿ ನಡೆದಿದೆ.
ದೆಹಲಿಯ ಉತ್ತಮ್ ನಗರದ ಸೇವಕ್ ಪಾರ್ಕ್ನಲ್ಲಿರುವ ತನ್ನ ಮನೆಯಲ್ಲಿ ಹಣ ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿದೆ ಎಂದು ಜನವರಿ 30 ರಂದು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ಆರಂಭಿಸಿದ್ದರು. ತನಿಖೆ ವೇಳೆ ಮನೆಯೊಳಗೆ ಬೀಗ ಮುರಿದಿರುವುದಾಗಲೀ, ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದಾಗಲೀ ಕಂಡು ಬಂದಿರದೇ ಇರುವುದು ಕಂಡು ಬಂದಿತ್ತು. ಇದರಂತೆ ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದು, ಈ ವೇಳೆ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಮನೆಯೊಳಗೆ ಬಂದಿರುವುದು ಕಂಡು ಬಂದಿದೆ.

ಇದೇ ವೇಳೆ ದೂರು ನೀಡಿದ ವ್ಯಕ್ತಿಯ ಹಿರಿಯ ಮಗಳು ಸೀಮಾ  ಮೇಲೆ ಅನುಮಾನ ವ್ಯಕ್ತವಾಗಿದೆ. ಇದರಂತೆ ಆಕೆಯನ್ನು ವಿಚಾರಣೆಗೊಳಪಡಿಸಿದಾಗ, ಆಕೆ ತನ್ನ ತಂಗಿಯೆ ಮೇಲೆ ಅಸೂಯೆ ಹಾಗೂ ದ್ವೇಷದ ಭಾವನೆ ಹೊಂದಿರುವುದು ಕಂಡು ಬಂದಿದೆ. ಸೀಮಾ ಸಾಲವನ್ನು ಮಾಡಿಕೊಂಡಿದ್ದು, ಇದೇ ವೇಳೆ ತಂಗಿಯ ಮದುವೆಗೆಂದು ಪೋಷಕರು ಚಿನ್ನಾಭರಣ ಹಾಗೂ ಹಣವನ್ನು ಮನೆಯಲ್ಲಿ ಇರಿಸಿರುವುದು ತಿಳಿದುಬಂದಿದ್ದು, ಈಗಾಗಲೇ ತಂಗಿಯ ಮೇಲೆ ಅಸೂಯೆ ಪಡುತ್ತಿದ್ದ ಈಕೆ ಹಣ ಹಾಗೂ ಚಿನ್ನಾಭರಣವನ್ನು ಕದ್ದು, ತನ್ನ ಕಷ್ಟ ದೂರಾಗಿಸಿಕೊಳ್ಳಲು ನಿರ್ಧರಿಸಿದ್ದಾಳೆ. ಇದರಂತೆ ಸಂಚು ರೂಪಿಸಿ ಬಂಗಾರ ಕದ್ದಿರುವುದು ತನಿಖೆಯಲ್ಲಿ ಬಯಲಾಗಿದೆ.

Ashitha S

Recent Posts

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

55 seconds ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

16 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

40 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

52 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

1 hour ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

1 hour ago