News Karnataka Kannada
Thursday, April 25 2024
Cricket
ಝಾರ್ಖಂಡ್

ಅಪ್ರಾಪ್ತ ಬಾಲಕರಿಂದ 11 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ

Untitled 47
Photo Credit :

ರಾಂಚಿ: ಮಂಗಳವಾರ ರಾತ್ರಿ ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿ 11 ವರ್ಷದ ಬಾಲಕಿಯ ಮೇಲೆ ಆರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿದ್ದಾರೆ. ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ 10 ರಿಂದ 15 ವರ್ಷ ವಯಸ್ಸಿನ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಹುಡುಗಿ ಮದುವೆ ಕಾರ್ಯಕ್ರಮಕ್ಕೆ ಹಾಜರಾಗಲು ಪಕ್ಕದ ಹಳ್ಳಿಗೆ ಹೋಗಿದ್ದಳು. ಒಂದು ನೃತ್ಯ ಕಾರ್ಯಕ್ರಮದ ಸಂದರ್ಭದಲ್ಲಿ, ಹುಡುಗಿ ತನ್ನ ಪರಿಚಯದ ಹುಡುಗರೊಂದಿಗೆ ಜಗಳವಾಡಿದ್ದಳು.

ಮಧ್ಯರಾತ್ರಿಯ ಸುಮಾರಿಗೆ ಆಕೆ ತನ್ನ ಇಬ್ಬರು ಸ್ನೇಹಿತರ ಜೊತೆಗೆ ಮನೆಗೆ ಹಿಂದಿರುಗುತ್ತಿದ್ದಾಗ, ಅವರ ಹಿಂದೆ ನಡೆದುಕೊಂಡು ಬಂದ ಹುಡುಗರು ಆಕೆಯನ್ನು ತಡೆದು ಏಕಾಂಗಿ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸ್ಥಳದಿಂದ ತಪ್ಪಿಸಿಕೊಂಡ ಆಕೆಯ ಇಬ್ಬರು ಸ್ನೇಹಿತರು ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಸ್ವಲ್ಪ ಸಮಯದ ನಂತರ, ಪೋಷಕರು ಅವಳನ್ನು ಹುಡುಕಲು ಬಂದಿದ್ದಾರೆ. ಹುಡುಗಿಯ ಪೋಷಕರನ್ನು ಕಂಡ ಆರೋಪಿ ಹುಡುಗರು ಓಡಿಹೋದರು ಎಂದು ಪೊಲೀಸರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು