News Karnataka Kannada
Saturday, May 04 2024
ಝಾರ್ಖಂಡ್

ಜಾರ್ಖಂಡ್‌ನ ನ್ಯಾಯಾಧೀಶ ಉತ್ತಮ್ ಆನಂದ್ ಸಾವು: 17 ಮಂದಿ ಬಂಧನ

Judge Murder 02082021
Photo Credit :

ರಾಂಚಿ: ಜಾರ್ಖಂಡ್‌ನ ಧನಬಾದ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಸಾವಿಗೆ ಸಂಬಂಧಿಸಿದಂತೆ 17 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ 243 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಬಯಲುಮಾಡಿದ ಒಬ್ಬ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

‘ಭಾನುವಾರ ಸಂಜೆ, ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿರುವ ಕೆಲವು ಪ್ರದೇಶಗಳ ಮೇಲೆ ದಾಳಿ ನಡೆಸಿ, 243 ವ್ಯಕ್ತಿಗಳನ್ನು ವಶಕ್ಕೆ ಪಡೆದು, ವಿವಾರಣೆಗೆ ಒಳಪಡಿಸಲಾಗಿದೆ‘ ಎಂದು ಎಸ್‌ಎಸ್‌ಪಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.

ಪೊಲೀಸರು ಜಿಲ್ಲೆಯಲ್ಲಿರುವ 53 ಹೋಟೆಲ್‌ಗಳಲ್ಲಿ ಶೋಧ ಕಾರ್ಯ ನಡೆಸಿ ಈ ಘಟನೆಗೆ ಸಂಪರ್ಕವಿರುವ 17 ಮಂದಿಯನ್ನು ಬಂಧಿಸಿದ್ದಾರೆ. ಅವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದೆ‘ ಎಂದು ಅವರು ತಿಳಿಸಿದರು.

ಜಡ್ಜಸ್‌ ಕಾಲೊನಿಯಲ್ಲಿ ನ್ಯಾಯಾಧೀಶ ಉತ್ತಮ್ ಆನಂದ್ ಅವರು ಕಳೆದ ಬುಧವಾರ ಬೆಳಿಗ್ಗೆ ವಾಯುವಿಹಾರ ಮಾಡುತ್ತಿದ್ದರು. ಆಗ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದು, ಪರಾರಿಯಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ದಾರಿಹೋಕರೊಬ್ಬರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು