ಜಾರ್ಖಂಡ್ : ಅನೈತಿಕ ಸಂಬಂಧ ಹೊಂದಿರುವ ಆರೋಪದ ಮೇಲೆ ಮಹಿಳೆ ಹಾಗೂ ಪುರುಷನನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿದೆ. ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಇಬ್ಬರೂ ವಿವಾಹವಾಗಿದ್ದರೂ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಮೆರವಣಿಗೆ ಮಾಡಿದವರು ಆರೋಪಿಸಿದ್ದಾರೆ.
ಮಯೂರ್ನಾಚ್ ಎಂಬ ಹಳ್ಳಿಯಲ್ಲಿ ಘಟನೆ ನಡೆದಿದ್ದು, ಪುರುಷ ಹಾಗೂ ಮಹಿಳೆ ಅಕ್ಕಪಕ್ಕದ ಗ್ರಾಮದವರಾಗಿದ್ದಾರೆ. ಇಬ್ಬರೂ ದಿನಗೂಲಿ ಮಾಡುತ್ತಾರೆ.
ಬೇರೆ ಬೇರೆ ಮದುವೆಯಾಗಿದ್ದರೂ ಪ್ರೀತಿಸುತ್ತಿದ್ದರು. ಅವರಿಬ್ಬರ ಮಧ್ಯೆ ಸಂಬಂಧ ಇತ್ತು ಎಂದು ಗ್ರಾಮದವರು ಹೇಳಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ಎಸ್ಪಿ ಅಂಬರ್ ಲಾಕ್ರಾ ತಿಳಿಸಿದ್ದಾರೆ.