ತಲೆಗೆ 1 ಕೋಟಿ ಬಹುಮಾನ ಹೊಂದಿದ್ದ ಮಾವೋವಾದಿ ಉನ್ನತ ನಾಯಕ ಪ್ರಶಾಂತ್ ಬೋಸ್ ಬಂಧನ

ರಾಂಚಿ: ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು ಸಿಕ್ಕಿದ್ದು 1 ಕೋಟಿ ಬಹುಮಾನ ಹೊಂದಿದ್ದ ಸಿಪಿಐ(ಮಾವೋವಾದಿ) ಸಂಘಟನೆಯ ಉನ್ನತ ನಾಯಕ ಪ್ರಶಾಂತ್ ಬೋಸ್ ಅಲಿಯಾಸ್ ಕಿಶನ್ ದಾ ನನ್ನು ಜಾರ್ಖಂಡ್‌ನಲ್ಲಿ ಬಂಧಿಸಲಾಗಿದೆ.

ಗುಪ್ತಚರ ಇಲಾಖೆಯ ಮಾಹಿತಿಯನ್ನು ಆಧರಿಸಿ ಸುಮಾರು 50 ವರ್ಷಗಳಿಂದ ಸಕ್ರಿಯವಾಗಿದ್ದ ಪ್ರಶಾಂತ್ ಬೋಸ್ ಜೊತೆಗೆ ಅವರ ಪತ್ನಿ ಶೀಲಾ ಮರಾಂಡಿಯನ್ನು ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರವೇ ಇಬ್ಬರನ್ನು ಬಂಧಿಸಿದ್ದರೂ ಇಬ್ಬರ ಪತ್ತೆಯನ್ನು ದೃಢೀಕರಿಸಿಕೊಂಡ ನಂತರ ಇದೀಗ ಇಬ್ಬರ ಬಂಧನವನ್ನು ಪೊಲೀಸರು ಖಚಿತಪಡಿಸಿದ್ದಾರೆ.

ಕೋಲ್ಕತ್ತಾದ ಜಾದವ್‌ಪುರ ಮೂಲದ ಮಾವೋವಾದಿ ನಾಯಕ ಕಿಶನ್ ದಾಸ್ ಗೆ 75 ವರ್ಷ ವಯಸ್ಸಾಗಿದೆ ಎಂದು ಹೇಳಲಾಗುತ್ತಿದೆ. ಕಿಶನ್ ದಾ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಜಾರ್ಖಂಡ್‌ನಲ್ಲಿ ಕಿಶನ್ ದಾ ವಿರುದ್ಧ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

Sneha Gowda

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

6 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

22 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago