ಜಾರ್ಖಂಡ್​​​ನ 12ನೇ ಸಿಎಂ ಆಗಿ ಚಂಪೈ ಸೊರೆನ್ ಪ್ರಮಾಣವಚನ ಸ್ವೀಕಾರ

ರಾಂಚಿ: ಜಾರ್ಖಂಡ್​​​ನ 12ನೇ ಸಿಎಂ ಆಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಂಚಿಯ ರಾಜಭವನದ ದರ್ಬಾರ್ ಹಾಲ್‌ ಈ ಕಾರ್ಯಕ್ರಮ ನಡೆದಿದ್ದು, ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ಇನ್ನು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮೇಲೆ ಭೂಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪವಿದ್ದು, ಅವರು ಈಗಾಗಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕಾರಣದಿಂದ ಚಂಪೈ ಸೊರೆನ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಜಾರ್ಖಂಡ್‌ನ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟವು 81 ಸದಸ್ಯರ ವಿಧಾನಸಭೆಯಲ್ಲಿ 47 ಶಾಸಕರನ್ನು ಹೊಂದಿದೆ. ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ 43 ಶಾಸಕರು ಚಂಪೈ ಸೊರೇನ್ ಅವರನ್ನು ಬೆಂಬಲಿಸಿದ್ದರು.

 

Ashitha S

Recent Posts

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

5 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

21 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

40 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

42 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

57 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

59 mins ago