ರಾಂಚಿ: ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಇಂದು (ಜ. 31)ಚಂಪೈ ಸೊರೆನ್ ಅವರನ್ನು ಜಾರ್ಖಂಡ್ನ ಮುಂದಿನ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಿದೆ.
ಈಗಾಗಲೇ ಹೇಮಂತ್ ಸೊರೆನ್ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಇದನ್ನು ಅಂಗೀಕರಿಸಿದ್ದಾರೆ. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಇಡಿ ಜಾರ್ಖಂಡ್ ಮುಖ್ಯಮಂತ್ರಿ ಯಾಗಿದ್ದ ಹೇಮಂತ್ ಸೊರೆನ್ ಅವರನ್ನು ರಾಂಚಿಯಲ್ಲಿ ವಿಚಾರಣೆ ಮಾಡುತ್ತಿದೆ.