ಜಾರ್ಖಂಡ್‌ನಲ್ಲಿ ಬಿಸಿಗಾಳಿ ಹಿನ್ನೆಲೆ 8ನೇ ತರಗತಿವರೆಗೆ ರಜೆ ಘೋಷಣೆ

ರಾಂಚಿ: ತೀವ್ರವಾದ ಬಿಸಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಜಾರ್ಖಂಡ್‌ನಲ್ಲಿ ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲೆಗಳ 8 ತರಗತಿವರೆಗೆ ರಜೆ ಘೋಷಣೆ ಮಾಡಲಾಗಿದೆ.

ಮುಂದಿನ ಸೂಚನೆ ಬರುವವರೆಗೂ ಇದು ಜಾರಿಯಲ್ಲಿರುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿ ಉಮಾ ಶಂಕರ್ ಸಿಂಗ್ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನರಹಿತ ಸೇರಿದಂತೆ ಎಲ್ಲಾ ವರ್ಗದ ಶಾಲೆಗಳಿಗೆ ಇದು ಅನ್ವಯಿಸುತ್ತದೆ. ಆದರೆ ಸರ್ಕಾರಿ, ಸರ್ಕಾರೇತರ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಸಮಯ ಬದಲಾವಣೆ: ಪ್ರತಿದಿನ ಶಾಲೆಗೆ ಹಾಜರಾಗಬೇಕಾದ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಬೇಸಿಗೆ ರಜೆಯ ಬಗ್ಗೆ ಪ್ರತ್ಯೇಕ ಆದೇಶವನ್ನು ನೀಡಲಾಗುವುದು ಎಂದು ಅದು ತಿಳಿಸಿದೆ.

9 ರಿಂದ 12 ರವರೆಗಿನ ತರಗತಿಗಳು ಮುಂದುವರಿಯುತ್ತದೆ. ಅವರು ಪ್ರಾರ್ಥನೆ, ಕ್ರೀಡೆಗಳು ಮತ್ತು ಇತರ ಚಟುವಟಿಕೆಗಳನ್ನು ಹೊರತುಪಡಿಸಿ ಬೆಳಗ್ಗೆ 7 ರಿಂದ 11.30 ರವರೆಗೆ ತರಗತಿಗಳು ನಡೆಯುತ್ತವೆ.

ಹವಾಮಾನ ಇಲಾಖೆಯು ಜಾರ್ಖಂಡ್‌ನ 13 ಜಿಲ್ಲೆಗಳಿಗೆ ಏಪ್ರಿಲ್ 30 ಮತ್ತು ಮೇ 1 ರಂದು ಬಿಸಿಗಾಳಿ ಎಚ್ಚರಿಕೆಯನ್ನು ನೀಡಿದೆ. ಭಾರತದ ಹವಾಮಾನ ಇಲಾಖೆ ಪೂರ್ವ ಭಾರತದಲ್ಲಿ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗುವ ಮುನ್ಸೂಚನೆ ನೀಡಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಪೂರ್ವ ಭಾರತದಾದ್ಯಂತ ತಾಪಮಾನ 44 ಡಿಗ್ರಿ ಸೆಲ್ಸಿಯಸ್ ತಲುಪಬಹುದು ಎಂದು ಎಚ್ಚರಿಕೆ ನೀಡಿದೆ.

Chaitra Kulal

Recent Posts

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

11 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

13 mins ago

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

25 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

27 mins ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

32 mins ago

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

41 mins ago