News Karnataka Kannada
Tuesday, April 30 2024
ಝಾರ್ಖಂಡ್

ಮೊಹರಂ ಮೆರವಣಿಗೆ ವೇಳೆ ಹೈಟೆನ್ಷನ್ ತಂತಿ ತಗುಲಿ ನಾಲ್ವರು ಸಾವು

Four killed after coming in contact with high-tension wire during Muharram procession
Photo Credit : News Kannada

ಬೊಕಾರೊ(ಜಾರ್ಖಂಡ್): ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಮೊಹರಂ ಮೆರವಣಿಗೆ ವೇಳೆ ಹೈಟೆನ್ಷನ್ ತಂತಿಯ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 80 ಕಿಮೀ ದೂರದಲ್ಲಿರುವ ಪೆಟಾರ್‌ವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಖೆಟ್ಕೊ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮೊಹರಂ ಧಾರ್ಮಿಕ ಧ್ವಜವು ಕಬ್ಬಿಣದಿಂದ ಮಾಡಲ್ಪಟ್ಟಿದ್ದು, ಇದು ವಿದ್ಯುತ್ ತಂತಿಗೆ ತಾಗಿ ಘಟನೆ ಸಂಭವಿಸಿದೆ ಎಂದು ಬೊಕಾರೊ ಪೊಲೀಸ್ ವರಿಷ್ಠಾಧಿಕಾರಿ ಪ್ರಿಯದರ್ಶಿ ಅಲೋಕ್ ಹೇಳಿದ್ದಾರೆ.

“ಶನಿವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಅವರು ಮೊಹರಂ ಮೆರವಣಿಗೆಗೆ ತಯಾರಿ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ತಾಜಿಯಾ (ಧಾರ್ಮಿಕ ಧ್ವಜ) 11,000 ವೋಲ್ಟ್‌ಗಳ ಹೈಟೆನ್ಶನ್ ವಿದ್ಯುತ್ ತಂತಿಯೊಂದಿಗೆ ಸಂಪರ್ಕಕ್ಕೆ ಬಂದಿದ್ದು ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು