ರಾಂಚಿ: ಶಿಕ್ಷಕನೊಬ್ಬ ತನ್ನ ಸಹೋದ್ಯೋಗಿಗಳನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ನತ್ಯೆಗೆ ಯತ್ನಿಸಿರುವ ಘಟನೆ ಜಾರ್ಖಂಡ್ ನ ಗೊಡ್ಡಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ರಾಂಚಿಯಿಂದ ೩೦೦ ಕಿಮೀ ದೂರದಲ್ಲಿರುವ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ಬೆಳಗ್ಗೆ ಸುಮಾರು ೧೧ ಗಂಟೆಗೆ ಘಟನೆ ನಡೆದಿದೆ ಎಂದು ಪೋಲಿಸ್ ಅಧಿಕಾರಿ ತಿಳಿಸಿದ್ದಾರೆ.
ಒಬ್ಬ ಮಹಿಳೆ ಸೇರಿದಂತೆ ಇಬ್ಬರು ಶಿಕ್ಷಕರ ಶವಗಳು ಶಾಲಾ ಕೊಠಡಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದ್ದು, ಆರೋಪಿಗೂ ಗಂಭಿರ ಗಾಯಗಳಾಗಿವೆ. ಈ ಬಗ್ಗೆ ಗೊಡ್ಡಾ ಎಸ್.ಪಿ ನಾಥು ಸಿಂಗ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.