ರಾಂಚಿ: ಜಾರ್ಖಂಡ್ನ ಮಾಜಿ ಸಿಎಂ ಹಾಗೂ ಜೆಎಂಎಂ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಇಂದು ರಾಂಚಿಯ ಪಿಎಂಎಲ್ಎ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇದೀಗ ಅವರನ್ನು ಸದ್ಯಕ್ಕೆ ಒಂದು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗುವುದು ಎಂದು ನ್ಯಾಯಾಲಯ ಆದೇಶ ನೀಡಿದೆ.
ಇನ್ನು ಭೂ ಅಕ್ರಮ ಪ್ರಕರಣ, ಅಕ್ರಮ ಗಣಿಗಾರಿಕೆ ಸೇರಿದಂತೆ ಕೆಲ ಆರೋಪ ಎದುರಿಸುತ್ತಿರುವ ಜಾರ್ಖಂಡ್ ಹೇಮಂತ್ ಸೊರೆನ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅವರ ಆಪ್ತ ಹಾಗೂ ಪಕ್ಷದ ಹಿರಿಯ ನಾಯಕ ಚಂಪೈ ಸೊರೆನ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಸುದೀರ್ಘ ವಿಚಾರಣೆ ಬಳಿಕ ಹೇಮೆಂತ್ ಸೊರೆನ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿರುವ ಕಾರಣ ಬಂಧನಕ್ಕೂ ಮೊದಲು ರಾಜ್ಯಪಾಲರ ಅನುಮತಿ ಕಡ್ಡಾಯವಾಗಿತ್ತು. ಹೀಗಾಗಿ ಇಡಿ ಅಧಿಕಾರಿಗಳು ಎಲ್ಲಾ ಅನುಮತಿ ಪತ್ರದೊಂದಿಗೆ ಸೊರೆನ್ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಅವರು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.