ಜಾರ್ಖಂಡ್: ದೆಹಲಿ ನಿವಾಸಕ್ಕೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಇದೀಗ ಏಕಾಏಕಿ ರಾಂಚಿಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ವೇಳೆ ಆಡಳಿತಾರೂಢ ಮೈತ್ರಿಕೂಟದ ಶಾಸಕರನ್ನು ಭೇಟಿ ಮಾಡಿದ ಅವರು, ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ.
ಜಮೀನು ಅಕ್ರಮದ ಹಗರಣವೊಂದಕ್ಕೆ ಸಂಬಂಧಿಸಿದಂತೆ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸೊರೇನ್ ಅವರ ದೆಹಲಿ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದರು. ಅಲ್ಲಿ ಸುಮಾರು 13 ತಾಸು ಶೋಧ ನಡೆಸಿದ ಅಧಿಕಾರಿಗಳು ₹36 ಲಕ್ಷ ನಗದು, ಎಸ್ಯುವಿ ಕಾರು ವಶಕ್ಕೆ ಪಡೆದಿದ್ದಾರೆ.