News Karnataka Kannada
Friday, May 03 2024
ಝಾರ್ಖಂಡ್

ಜಾರ್ಖಂಡ್‌: ತಾಯಿಯ ಎದುರೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

Hyderabad: Four-year-old girl raped
Photo Credit : Freepik

ದಿಯೋಘರ್(ಜಾರ್ಖಂಡ್‌): ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತಾಯಿಯ ಎದುರೇ ಅಪ್ರಾಪ್ತ ಬಾಲಕಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

ಬಾಲಕಿ ಮತ್ತು ಆಕೆಯ ತಾಯಿ ಭಾನುವಾರ ದಿಯೋಘರ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮನೆಗೆ ಹಿಂದಿರುಗುತ್ತಿದ್ದಾಗ ಮಧುಪುರ್ ಪ್ರದೇಶದಲ್ಲಿ ಎರಡು ದ್ವಿಚಕ್ರವಾಹನಗಳಲ್ಲಿ ಬಂದ ಐದು ಜನರು ಬಾಲಕಿಯನ್ನು ಎಳೆದೊಯ್ದಿದ್ದಾರೆ. ಇದನ್ನು ತಡೆಯಲು ಮುಂದಾದ ಆಕೆಯ ತಾಯಿಯನ್ನು ಥಳಿಸಿದ್ದು, ಆಕೆಯ ಎದುರೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಬಾಲಕಿಯ ತಾಯಿ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಇಲ್ಲಿಯವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನುಳಿದ ಮೂವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು