ಜಾರ್ಖಂಡ್: ಜಾರ್ಖಂಡ್ನ ಚೈಬಾಸಾದಲ್ಲಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಸಾಫ್ಟ್ವೇರ್ ಇಂಜಿನಿಯರ್ಗೆ ಥಳಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು 10 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಮಹಿಳೆ ಮನೆಯಿಂದ ಕೆಲಸ ಮಾಡುತ್ತಿದ್ದು, ಗುರುವಾರ ಸಂಜೆ ತನ್ನ ಗೆಳೆಯನೊಂದಿಗೆ ಮೋಟಾರ್ಬೈಕ್ನಲ್ಲಿ ಹೊರಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಎಂಟು-ಹತ್ತು ಜನರಿದ್ದ ಗುಂಪು ಜೋಡಿಯನ್ನು ತಡೆದಿದೆ. ಮಹಿಳೆಯ ಗೆಳೆಯನನ್ನು ಥಳಿಸಿತು ಹಾಗೂ ಮಹಿಳೆಯನ್ನು ಏಕಾಂತ ಪ್ರದೇಶಕ್ಕೆ ಕರೆದೊಯ್ದ ನಂತರ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಈ ಘಟನೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.