News Karnataka Kannada
Friday, May 10 2024
ಝಾರ್ಖಂಡ್

ಹಣೆಗೆ ಬಿಂದಿ ಇಟ್ಟುಕೊಂಡಿದ್ದಕ್ಕೆ ಥಳಿಸಿದ ಶಿಕ್ಷಕಿ: ವಿದ್ಯಾರ್ಥಿನಿ ಆತ್ಮಹತ್ಯೆ

girl dies
Photo Credit : By Author

ರಾಂಚಿ: ಹಣೆಗೆ ಬಿಂದಿ ಧರಿಸಿ ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕಿಯೊಬ್ಬರು ಥಳಿಸಿದ್ದು, ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.

ಜಾರ್ಖಂಡ್ ನ ಧನ್‌ಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಹಣೆಗೆ ಬಿಂದಿ ಧರಿಸಿ ಶಾಲೆಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕಿಯೊಬ್ಬರು ಥಳಿಸಿದ್ದು, ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧನ್‌ಬಾದ್‌ನ ಟೆತುಲ್ಮರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿನಿಯ ಪೋಷಕರು ಹಾಗೂ ಸ್ಥಳೀಯರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಿ, ಪೊಲೀಸರು ತನಿಖೆ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಘಟನೆಯ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ, ವಿದ್ಯಾರ್ಥಿನಿಯೊಬ್ಬಳು ಹಣೆಗೆ ಬಿಂದಿ ಧರಿಸಿ ಶಾಲೆಗೆ ಹೋಗಿದ್ದಕ್ಕೆ ಆಕೆಯನ್ನು ಥಳಿಸಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಅಲ್ಲದೇ ಘಟನೆಯ ಕುರಿತು ತನಿಖೆ ನಡೆಸಲು ಎನ್‌ಸಿಪಿಸಿಆರ್ ತಂಡವು ಧನ್‌ಬಾದ್‌ಗೆ ತೆರಳಲಿದೆ ಎಂದು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು