ಜಾರ್ಖಂಡ್‌ನಲ್ಲಿ 50 ವರ್ಷ ಪೂರೈಸಿದ ಆದಿವಾಸಿ, ದಲಿತರಿಗೆ ಪಿಂಚಣಿ

ರಾಂಚಿ: ಇನ್ನು ಮುಂದೆ ಜಾರ್ಖಂಡ್‌ನಲ್ಲಿ 50 ವರ್ಷ ಪೂರ್ಣಗೊಂಡ ಆದಿವಾಸಿ ಹಾಗೂ ದಲಿತ ಸಮುದಾಯದ ವ್ಯಕ್ತಿಗಳು ಪಿಂಚಣಿ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಘೋಷಣೆ ಮಾಡಿದ್ದಾರೆ.

ಅವರು ಇಂದು ರಾಜ್ಯದಲ್ಲಿ ಜೆಎಂಎಂ (ಜಾರ್ಖಂಡ್ ಮುಕ್ತಿ ಮೋರ್ಚಾ) ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ರಾಂಚಿಯ ಮೊರಾಬಾಡಿ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿ, ಈ ಹೊಸ ಪಿಂಚಣಿ ಸೌಲಭ್ಯದ ಬಗ್ಗೆ ತಿಳಿಸಿದರು. ಈ ಸಮುದಾಯಗಳಲ್ಲಿ ಮರಣ ಪ್ರಮಾಣ ಅಧಿಕವಾಗಿದ್ದು, 60 ವರ್ಷಗಳ ನಂತರ ಉದ್ಯೋಗಗಳು ಸಿಗುವುದಿಲ್ಲ ಎಂದರು.

ಜೆಎಂಎಂ ನಾಲ್ಕು ವರ್ಷಗಳಲ್ಲಿ 60 ವರ್ಷ ಮೇಲ್ಪಟ್ಟ 36 ಲಕ್ಷ ಜನರಿಗೆ, 18 ವರ್ಷ ಮೇಲ್ಪಟ್ಟ ವಿಧವೆಯರಿಗೆ ಮತ್ತು ದೈಹಿಕ ವಿಕಲಚೇತನರಿಗೆ ಪಿಂಚಣಿ ಸೌಲಭ್ಯಗಳನ್ನು ನೀಡಿದೆ ಎಂದರು.

Gayathri SG

Recent Posts

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

9 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

11 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

25 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

41 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

53 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

57 mins ago