ನವದೆಹಲಿ: ಪೇಟಿಯಂ ವ್ಯಾಲೆಟ್ ಸೇವೆಯನ್ನು ತಾನು ಖರೀದಿ ಸಂಬಂಧ ಯಾವುದೇ ಮಾತುಕತೆ ನಡೆದಿಲ್ಲ ಎಂದು ಜಿಯೋ ಫೈನಾನ್ಸ್ ಅಧಿಕೃತವಾಗಿ ತಿಳಿಸಿದೆ.
ಪೇಮೆಂಟ್ಸ್ ಬ್ಯಾಂಕ್ಗೆ ಆರ್ಬಿಐ ಹಲವು ನಿರ್ಬಂಧ ವಿಧಿಸಿದ ಬಳಿಕ ಪೇಟಿಎಂ ಸಾಕಷ್ಟು ನಷ್ಟಕ್ಕೆ ಸಿಲುಕಿಕೊಂಡಿದೆ. ಈ ಬೆನ್ನಲ್ಲೇ ಮುಕೇಶ್ ಅಂಬಾನಿ ನೇತೃತ್ವದ ಜಿಯೋ ಫೈನಾನ್ಸ್ ಪೇಟಿಯಂ ವ್ಯಾಲೆಟ್ ಸೇವೆಯನ್ನು ಖರೀದಿಸಲಿದೆ ಎಂದು ವರದಿಯಾಗಿತ್ತು.
ಈ ವರದಿಯ ಬೆನ್ನಲ್ಲೇ ಬಾಂಬೆ ಷೇರು ಮಾರುಕಟ್ಟೆಗೆ ಜಿಯೋ ಫೈನಾನ್ಸಿಯಲ್ ಸರ್ವಿಸ್ ಲಿಮಿಟೆಡ್ ತಾನು ಪೇಟಿಎಂ ವ್ಯಾಲೆಟ್ ಖರೀದಿಸುವುದಿಲ್ಲ ಎಂದು ತಿಳಿಸಿದೆ. ಖರೀದಿ ವಿಚಾರ ಕೇವಲ ಊಹಾತ್ಮಕ ಸುದ್ದಿಯಾಗಿದೆ. ಈ ವಿಷಯದಲ್ಲಿ ಯಾವುದೇ ಮಾತುಕತೆ ನಡೆಸಿಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸುತ್ತೇವೆ ಎಂದು ತಡರಾತ್ರಿ ಜಿಯೋ ಫೈನಾನ್ಸ್ ಫೈಲಿಂಗ್ನಲ್ಲಿ ತಿಳಿಸಿದೆ.