ಕೋಯಿಕ್ಕೋಡ್: ಕೇರಳದಲ್ಲಿ ನಿಫಾ ವೈರಸ್ ಅಬ್ಬರ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ ಆರಕ್ಕೇರಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಘೋಷಣೆ ಮಾಡಲಾಗಿತ್ತು. ಸದ್ಯ ಈ ರಜೆಯನ್ನು ಸೆ.24ರ ವರೆಗೆ ವಿಸ್ತರಿಸಲಾಗಿದೆ.
ಎಲ್ಲಾ ಶಾಲೆಗಳಿಗೆ ಸೆ.14 ಮತ್ತು 15 ರಂದು ರಜೆ ನೀಡುವಂತೆ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಅಲ್ಲದೆ, ಈ ಆದೇಶ ಅಂಗನವಾಡಿಗಳು, ಮದರಾಸಗಳು, ಬೋಧನಾ ಕೇಂದ್ರಗಳು ಮತ್ತು ವೃತ್ತಿಪರ ಕಾಲೇಜುಗಳಿಗೂ ಅನ್ವಯಿಸುತ್ತದೆ ಎಂದು ತಿಳಿಸಲಾಗಿತ್ತು. ಬಳಿಕ ಒಂದು ದಿನ ರಜೆಯನ್ನು ವಿಸ್ತರಿಸಲಾಗಿತ್ತು. ಇದೀಗ ಮುಂಜಾಗ್ರತಾ ಕ್ರಮವಾಗಿ ಸೆ.24 ರವರೆಗೆ ರಜೆ ವಿಸ್ತರಿಸಲಾಗಿದೆ.