News Karnataka Kannada
Friday, May 03 2024
ಕೇರಳ

ʻಟ್ಯಾಟೂʼ ಹಾಕುವ ನೆಪದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಅಂದರ್

Tatoo
Photo Credit :

ಕೊಚ್ಚಿ (ಕೇರಳ) : ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕೇರಳ ಪೊಲೀಸರು ಟ್ಯಾಟೂ ಕಲಾವಿದನೊಬ್ಬನನ್ನು ಶನಿವಾರ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.

ಕೊಚ್ಚಿಯ ಎಡಪಲ್ಲಿಯಲ್ಲಿ ಟ್ಯಾಟೂ ಸ್ಟುಡಿಯೋ ನಡೆಸುತ್ತಿರುವ ಆರೋಪಿ ಸುಜೀಶ್ ಪಿಎಸ್ ವಿರುದ್ಧ ಆರು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ಯಾಟೂ ಸ್ಟುಡಿಯೋದಲ್ಲಿ, ಟ್ಯಾಟೂ ಹಾಕಿಸಿಕೊಳ್ಳುವ ವೇಳೆ ಸುಜೀಶ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು 18 ವರ್ಷದ ಯುವತಿಯೊಬ್ಬಳು ಆರೋಪಿಸಿದ್ದಾರೆ.

ಸುಜೀಶ್‌ನನ್ನು ಚೇರನಲ್ಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ನಾಗರಾಜು ತಿಳಿಸಿದ್ದಾರೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ 354 ಮತ್ತು 376 ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು