News Karnataka Kannada
Saturday, May 04 2024
ಕೇರಳ

ಕೇರಳಕ್ಕೆ ಮುಂಗಾರು ಜೂನ್ 1ರೊಳಗೆ ಪ್ರಾರಂಭವಾಗುವ ನಿರೀಕ್ಷೆ!

Kerala: Heavy rains lash various parts of the state, red alert issued for 8 districts
Photo Credit :

ಕೇರಳ: ಇಂದು ಮಾನ್ಸೂನ್ ಪ್ರಾರಂಭವಾಗುವ ನಿರೀಕ್ಷೆ ಹೊಂದಲಾಗಿತ್ತು. ಇದೀಗ ಕೇರಳಕ್ಕೆ ಮುಂಗಾರು ಆಗಮನದಲ್ಲಿ ವಿಳಂಬವಾಗಿದೆ. ಜೂನ್ 1ರೊಳಗೆ ಕೇರಳ ರಾಜ್ಯದಾದ್ಯಂತ ಮುಂಗಾರು ಆರಂಭ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು ಮತ್ತು ಮಾಲ್ಡೀವ್ಸ್ ಮತ್ತು ಲಕ್ಷದ್ವೀಪದ ಪಕ್ಕದ ಪ್ರದೇಶಗಳು ಹಾಗೂ ಕೊಮೊರಿನ್​ನ ಕೆಲವೆಡೆ ನೈಋತ್ಯ ಮುಂಗಾರು ಮತ್ತಷ್ಟು ಪ್ರವೇಶ ಪಡೆಯುವ ನಿರೀಕ್ಷೆ ಇದೆ. ಅದೇ ರೀತಿಯಾಗಿ ಈ ವಾರದಲ್ಲಿ ಕೇರಳದಲ್ಲಿ ಮಾನ್ಸೂನ್ ಆರಂಭವಾಗಲು ಪೂರಕವಾದ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ದೇಶದ ಆರ್ಥಿಕತೆ ಮೇಲೂ ಪಾತ್ರ ವಹಿಸುತ್ತದೆ. ಇನ್ನು, ಈ ಹಿಂದೆಯೇ ಮುಂಗಾರು ಪ್ರವೇಶದ ಬಗ್ಗೆ ಮಾಹಿತಿ ನೀಡಿದ್ದ ಹವಾಮಾನ ಇಲಾಖೆ ಇದರಲ್ಲಿ 4 ದಿನಗಳ ವ್ಯತ್ಯಾಸವಾಗುವ ಸಾಧ್ಯತೆ ಇದೆ ಎಂದೂ ತಿಳಿಸಿತ್ತು.

ಅಸನಿ ಚಂಡಮಾರುತದ ಪ್ರಭಾವದಿಂದಾಗಿ ಮೇ 16ಕ್ಕೆ ಅಂಡಮಾನ್ ಅ​ನ್ನು ಮುಂಗಾರು ತಲುಪಿತ್ತು. ಆದರೆ, ಆರು ದಿನಗಳ ವಿರಾಮದ ಬಳಿಕ ಈಗ ಶ್ರೀಲಂಕಾದಿಂದ ಕೇರಳದ ಕಡೆಗೆ ಚಲಿಸಲು ಪ್ರಾರಂಭಿಸಿದೆ. ಕೇರಳಕ್ಕೆ ಆಗಮಿಸುವುದು ಮಾತ್ರವೇ ಬಾಕಿ ಇದೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು