ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 203 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 192 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 127 ಮಂದಿ ಗುಣಮುಖರಾದರು. ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಒಂದು ಸಾವು ಸಂಭವಿಸಿದೆ.
ಕೇರಳದಲ್ಲಿ 12,616 ಹೊಸ ಪ್ರಕರಣ
ಕೇರಳದಲ್ಲಿ ಬುಧವಾರ ಹೊಸದಾಗಿ 12,616 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 12,018 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 14,516 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 134 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ಕೇರಳದಲ್ಲಿ ಮಂಗಳವಾರ ಶೇಕಡಾ 10.44 ಟಿಪಿಆರ್ ದಾಖಲಾಗಿದೆ.