News Karnataka Kannada
Friday, May 03 2024
ಕೇರಳ

ಕೇರಳದ ಹಲವು ಭಾಗಗಳಲ್ಲಿ ಗುರುವಾರ ಗುಡುಗು, ಮಿಂಚು ಸಹಿತ ಭಾರಿ ಮಳೆ : 8 ಜಿಲ್ಲೆಗಳಲ್ಲಿ ‘ಆರೆಂಜ್‌ ಅಲರ್ಟ್‌’

Rain Main Newsk 2307886304 2
Photo Credit :

ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಗುರುವಾರ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ.

ರಾಜ್ಯದ ಪಟ್ಟನಂತಿಟ್ಟ, ಕೋಟಯಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ‘ಆರೆಂಜ್‌ ಅಲರ್ಟ್‌’ ಘೋಷಿಸಿದೆ.
ತಿರುವನಂತಪುರ, ಕೊಲ್ಲಂ, ಆಲಪ್ಪುಳ, ಎರ್ನಾಕುಲಂ, ತ್ರಿಶೂರ್ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಹಿನ್ನೆಲೆಯಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಕೇರಳದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ರಾಜ್ಯದ ಬಹುತೇಕ ಸ್ಥಳಗಳು ಮತ್ತು ಲಕ್ಷದ್ವೀಪದ ಕೆಲವು ಕಡೆ ಮಳೆಯಾಗಿದೆ ಎಂದು ಐಎಂಡಿ ಹೇಳಿಕೆಯಲ್ಲಿ ತಿಳಿಸಿದೆ.

ಪಾಲಕ್ಕಾಡ್ ಜಿಲ್ಲೆಯ ಪರಂಬಿಕುಲಂನಲ್ಲಿ 12 ಸೆಂ.ಮೀ. ಮಳೆಯಾಗಿದ್ದು, ತ್ರಿಶೂರ್ ಮತ್ತು ಪಾಲಕ್ಕಾಡ್‌ನಲ್ಲಿ ಕ್ರಮವಾಗಿ 11 ಸೆಂ.ಮೀ. ಮತ್ತು 9 ಸೆಂ.ಮೀ. ಮಳೆಯಾಗಿದೆ.

ಕೇರಳದ ಕರಾವಳಿಯಲ್ಲಿ ಗುರುವಾರ 40-50 ಕಿ.ಮೀ. ವೇಗದ ಚಂಡಮಾರುತದ ವಾತಾವರಣ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಐಎಂಡಿ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು