ಕೇರಳ : ಕೇರಳದ 11 ಜಿಲ್ಲೆಗಳಲ್ಲಿ ನಿರಂತರ ಮಳೆ ಬೀಳುವ ಸೂಚನೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಭಾರತೀಯ ಹವಾಮಾನ ಇಲಾಖೆ ಗುರುವಾರವೂ 12 ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಅಕ್ಟೋಬರ್ 20 ರಂದು ತಿರುವನಂತಪುರ, ಪತ್ತನಂತಿಟ್ಟ, ಕೋಟ್ಟಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಅಕ್ಟೋಬರ್ 21ರಂದು ಕಣ್ಣೂರು ಮತ್ತು ಕಾಸರಗೋಡು ಹೊರತು ಪಡಿಸಿ ಎಲ್ಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಅಪಾರ ನಾಶ ನಷ್ಟ ಸಂಭವಿಸಿದೆ.