ಕೇರಳ

ಕೇರಳ ರಾಜ್ಯದಲ್ಲಿ ಕೊರೊನಾ ಲಸಿಕೆ ಪ್ರಗತಿಯಲ್ಲಿ

ತಿರುವನಂತಪುರಂ: ದೇಶದೆಲ್ಲೆಡೆ ಕೊರೊನಾ ವಿಚಾರವಾಗಿ ಸುದ್ದಿಯಲ್ಲಿರುವ ಕೇರಳದಲ್ಲಿ ಸೆಪ್ಟೆಂಬರ್ 30ರೊಳಗೆ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಕೊರೊನಾ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಕೋವಿಡ್ -19 ಮೌಲ್ಯಮಾಪನ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ವಿಜಯನ್, ರಾಜ್ಯದಲ್ಲಿ ಸೆಪ್ಟೆಂಬರ್ 3 ರಿಂದ 9 ರ ವರೆಗೆ ಕೇವಲ ಶೇ. 2 ರಷ್ಟು ಸಕ್ರಿಯ ಪ್ರಕರಣಗಳಿಗೆ ಆಕ್ಸಿಜನ್ ಬೆಡ್ ಗಳು ಬೇಕಾಗಿದ್ದು, ಕೇವಲ ಶೇ. 1 ರಷ್ಟು ಸೋಂಕಿತರು ಐಸಿಯುಗೆ ದಾಖಲಾಗಿದ್ದಾರೆ ಎಂದರು.
ಇಲ್ಲಿಯವರೆಗೆ, 18 ವರ್ಷಕ್ಕಿಂತ ಮೇಲ್ಪಟ್ಟ ಶೇ .78.03 ರಷ್ಟು ಜನರು ಮೊದಲ ಡೋಸ್ ಲಸಿಕೆ ಪಡೆದರೆ, ಶೇ.30.16 ರಷ್ಟು ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ವಿಜಯನ್ ತಿಳಿಸಿದ್ದಾರೆ.
45 ವರ್ಷಕ್ಕಿಂತ ಮೇಲ್ಪಟ್ಟ ಶೇ. 93 ರಷ್ಟು ಜನರು ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದರೆ, ಶೇ. 50 ರಷ್ಟು ಜನರು ಎರಡನೇ ಡೋಸ್ ಅನ್ನು ಪಡೆದಿದ್ದಾರೆ ಎಂದು ವಿಜಯನ್ ಹೇಳಿದರು.ಹಲವು ಟೀಕೆಗೆ ಗುರಿಯಾಗುತ್ತಿರುವ ಕೇರಳ ಸರ್ಕಾರ: ಕೊರೊನಾ ಮೊದಲ ಅಲೆಯನ್ನು ಯಶಸ್ವಿಯಾಗಿ ನಿರ್ವಹಿಸಿ ಗಮನ ಸೆಳೆದಿದ್ದ ಕೇರಳ ಸರ್ಕಾರ ಎರಡನೇ ಅಲೆಯ ವೇಳೆ ತನ್ನ ವಿವಾದಾತ್ಮಕ ನೀತಿಗಳಿಂದ ಟೀಕೆಗೆ ಒಳಗಾಗುತ್ತಿದೆ.

ಮೊದಲ ಡೋಸ್‌ನ 4 ವಾರದಲ್ಲೇ ಎರಡನೇ ಡೋಸ್‌ಗೆ ಅನುಮತಿ ನೀಡಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ಮೊದಲ ಡೋಸ್‌ನ 4 ವಾರದಲ್ಲೇ ಎರಡನೇ ಡೋಸ್‌ಗೆ ಅನುಮತಿ ನೀಡಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್

ರಾಜ್ಯದಲ್ಲಿ ನಿತ್ಯ 30 ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದರೂ, ಪಾಸಿಟಿವಿಟಿ ದರ ಶೇ.15ಕ್ಕಿಂಹೆಚ್ಚಿದ್ದರೂ ಕಾಲೇಜು, ವಿವಿಗಳನ್ನು ತೆರೆಯಲು ನಿರ್ಧರಿಸಿದೆ.

ಮಂಗಳವಾರವಷ್ಟೇ ವಾರಾಂತ್ಯ ಹಾಗೂ ರಾತ್ರಿ ಕರ್ಫ್ಯೂ ರದ್ದು ಮಾಡಿದ್ದ ಕೇರಳ ಸರ್ಕಾರದ ಇದೀಗ ಉನ್ನತ ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಅಪಾಯಕಾರಿ ನಿರ್ಧಾರ ಪ್ರಕಟಿಸಿದ್ದು, ಭಾರೀ ಟೀಕೆಗೆ ಗುರಿಯಾಗಿದೆ. ದಿನೇ ದಿನೇ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವಾಗ ಇಂಥ ನಿರ್ಧಾರಗಳು ಬೇಕಿರಲಿಲ್ಲ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ.

ಕೇರಳದಲ್ಲಿ ಬಕ್ರೀದ್‌ ಹಾಗೂ ಓಣಂ ಹಬ್ಬಕ್ಕೆ ಕೋವಿಡ್‌ ನಿಯಮಗಳನ್ನು ಸಡಿಲಗೊಳಿಸಲಾಗಿತ್ತು. ಇದಾದ ಬಳಿಕ ಭಾರೀ ಪ್ರಮಾಣದಲ್ಲಿ ಕೋವಿಡ್‌ ಸೋಂಕು ಸ್ಫೋಟಗೊಂಡಿತ್ತು. ಹೀಗಾಗಿ ವೀಕೆಂಡ್‌ ಕರ್ಫ್ಯೂ ಹಾಗೂ ನೈಟ್‌ ಕರ್ಫ್ಯೂ ಜಾರಿಗೊಳಿಸಿತ್ತು. ಇದರಿಂದ ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದ್ದು, ಹೀಗಾಗಿ ಅವುಗಳನ್ನು ಮಂಗಳವಾರ ರದ್ದುಗೊಳಿಸಿತ್ತು. ಇದಾದ ಬೆನ್ನಲ್ಲೇ ಕಾಲೇಜು ತೆರೆಯುವ ನಿರ್ಧಾರ ಪ್ರಕಟಿಸಿದೆ.

Swathi MG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago