News Karnataka Kannada
Monday, April 29 2024
ದೇಶ

ನಿಫಾ ವೈರಸ್, ಮೃತಪಟ್ಟ ಬಾಲಕನ ಸಂಪರ್ಕದಲ್ಲಿದ್ದ 20 ಮಂದಿ ಸೇಫ್

Nifha Virus
Photo Credit :

ಕೋಳಿಕೋಡ್ :  ನಿಫಾ ವೈರಸ್ ನಿಂದಾಗಿ  ಮೃತಪಟ್ಟ  12 ವರ್ಷದ ಬಾಲಕನ ಸಂಪರ್ಕದಲ್ಲಿದ್ದವರರಿಗೆ ನಿಫಾ ವೈರಸ್ ಪತ್ತೆಯಾಗಿಲ್ಲ ಎಂಬುದು ಇದೀಗ ದೃಢಪಟ್ಟಿದೆ.

ಬಾಲಕನ ಸಂಪರ್ಕದ್ದಲ್ಲಿದ್ದ 30 ಮಂದಿಯ ಮಾದರಿ ಪರೀಕ್ಷೆಗೊಳಪಡಿಸಲಾಗಿದ್ದು, ಈ ಪೈಕಿ 20 ಮಂದಿ ವರದಿಗಳು ನೆಗೆಟಿವ್ ಆಗಿವೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಾಹಿತಿ ನೀಡಿದ್ದಾರೆ.

20 ಮಾದರಿಗಳಲ್ಲಿ 15 ಪುಣೆಯಲ್ಲಿ ಮತ್ತು ಕೋಯಿಕ್ಕೋಡ್ 5 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಇಲ್ಲಿಯವರೆಗೆ ಸುಮಾರು 30 ಮಂದಿಯನ್ನು ಪರೀಕ್ಷೆ ಒಳಪಡಿಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಆಗಿದೆ. ಪ್ರಸ್ತುತ ಕೋಳಿಕೋಡ್​ನಲ್ಲಿರುವ ವೈದ್ಯಕೀಯ ಕಾಲೇಜಿನಲ್ಲಿ ನಿಫಾ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಸುಮಾರು 68 ಮಂದಿಯನ್ನು ಪ್ರತ್ಯೇಕವಾಗಿ ಇಡಲಾಗಿದೆ. ಅವರ ಆರೋಗ್ಯವನ್ನು 42 ದಿನಗಳ ಕಾಲ ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ನಿಫಾ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದವರ ಆರೋಗ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು  ತಿಳಿದು ಬಂದಿದೆ .

ಭಾನುವಾರ ಮುಂಜಾನೆ 12 ವರ್ಷದ ಬಾಲಕ ನಿಫಾ ಸೋಂಕಿನಿಂದ ಸಾವನ್ನಪ್ಪಿದ್ದ. ಆತ ನಿಫಾ ವೈರಸ್​​ನಿಂದ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯಕೀಯ ಮೂಲಗಳು ದೃಢೀಕರಿಸಿದ ನಂತರ ಕೋಯಿಕ್ಕೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಲಾಯಿತು. ಸೋಂಕು ಬೇರೆಡೆ ಹರಡದಂತೆ ತಡೆಯಲು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಿದರು.

ಮೃತ ಬಾಲಕನ ಮನೆಯ ಸುತ್ತಲೂ ಸುಮಾರು ಮೂರು ಕಿಲೋಮೀಟರ್ ದೂರದವರೆಗೆ ನಿರ್ಬಂಧ ವಿಧಿಸಲಾಯಿತು. ಚತಮಂಗಲಂ ಪಂಚಾಯಿತಿಯ ಪಜೂರು ಅನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್​​ನ ತಂಡ ಹುಡುಗನ ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು