ಕೇರಳ : ಕೇರಳದ ಕೋಯಿಕೋಡ್ ನಲ್ಲಿ ನಿಫಾ ವೈರಸ್ ಸೋಂಕಿನ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ 13 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಪರೀಕ್ಷೆಗೆಂದು ಕಳುಹಿಸಿದ ಬಾಲಕನ ಮಾದರಿಗಳಲ್ಲಿ ನಿಫಾ ವೈರಸ್ ಇರುವುದನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ದೃಢಪಡಿಸಿದೆ.
ನಿಫಾ ವೈರಸ್ ಬಾವಲಿಗಳ ಲಾಲಾರಸದಿಂದ ಹರಡುತ್ತದೆ. ನಿಫಾ ಸೋಂಕಿನ ಶಂಕೆ ವ್ಯಕ್ತವಾಗಿರುವ ಮಾಹಿತಿಯ ನಂತರ ರಾಜ್ಯ ಸರ್ಕಾರ ಶನಿವಾರ ಆರೋಗ್ಯ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ.
ಕೆಲ ದಿನಗಳ ಹಿಂದಷ್ಟೇ ಬಾಲಕ ಅತೀವ್ರ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದ. ಪ್ರಾಥಮಿಕ ಪರೀಕ್ಷೆಗಳಿಂದ ಬಾಲಕನಿಗೆ ನಿಫಾ ವೈರಸ್ ಸೋಂಕು ಇರುವ ಶಂಕೆಗಳು ವ್ಯಕ್ತವಾಗಿದ್ದವು.