News Karnataka Kannada
Monday, April 29 2024
ದೇಶ

ಮದ್ಯದಂಗಡಿಗಳ ಮುಂದೆ ಖರೀದಿಗಾಗಿ ನಿಂತವರನ್ನು ಕೀಳಾಗಿ ಕಾಣಬಾರದು : ಕೇರಳ ಹೈಕೋರ್ಟ್

Kerala High Court Dt 17 6 21 Dt 1762113 1 Newsk 7090924364
Photo Credit :
ಕೊಚ್ಚಿ : ಮದ್ಯದಂಗಡಿಗಳ ಮುಂದೆ ಖರೀದಿಗಾಗಿ ಸಾಲು ನಿಂತವರನ್ನು ಕೀಳಾಗಿ ಕಾಣಬಾರದು ಮತ್ತು ಅವರಿಗೆ ಮುಜುಗರವಾಗುವಂತಹ ಪರಿಸ್ಥಿತಿ ಇರಬಾರದು ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಕೇರಳ ಪಾನೀಯ ನಿಗಮ ನಿಯಮಿತದ ವ್ಯಾಪ್ತಿಯಲ್ಲಿರುವ ಮದ್ಯದಂಗಡಿ ಮತ್ತು ಖಾಸಗಿ ವ್ಯಾಪ್ತಿಯಲ್ಲಿರುವ ಅಂಗಡಿಗಳಲ್ಲಿ ಅಬಕಾರಿ ಇಲಾಖೆ ಮದ್ಯ ಖರೀದಿಗೆ ಬರುವವರನ್ನು ಗೌರವವಾಗಿ ಕಾಣುವಂತೆ ಮಾಡಬೇಕು ಎಂದು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಪೀಠ ಆದೇಶ ನೀಡಿ ಬ್ಯಾಂಕ್ ಶಾಖೆ ಸಮೀಪಕ್ಕೆ ಮದ್ಯದಂಗಡಿ ಸ್ಥಳಾಂತರಿಸಿರುವುದನ್ನು ಪ್ರಶ್ನಿಸಿ ಮಹಿಳೆಯೊಬ್ಬರು ಹೈಕೋರ್ಟ್‍ಗೆ ಬರೆದಿದ್ದ ಪತ್ರದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ.
ಮದ್ಯದಂಗಡಿಗಳ ಮುಂದೆ ಖರೀದಿಗಾಗಿ ಜನರು ಶಿಸ್ತಿನಿಂದ ಸಾಲಿನಲ್ಲಿ ನಿಲ್ಲುವವರನ್ನು ನೋಡಿ ನಾನೇ ಮುಜುಗರಕ್ಕೆ ಒಳಗಾಗಿದ್ದೇನೆ ಎಂದು ಹೇಳಿರುವ ನ್ಯಾಯಮೂರ್ತಿಗಳು ಮದ್ಯದಂಗಡಿಗೆ ಬರುವವರನ್ನು ಗೌರವದಿಂದ ಕಾಣುವಂತೆ ಮಾಡಲಾಗುವ ಕ್ರಮಗಳ ಬಗ್ಗೆ ಒಂದು ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಕೇರಳ ಅಬಕಾರಿ ಇಲಾಖೆಗೆ ಸೂಚನೆ ನೀಡಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು