Categories: ಕೇರಳ

ಸಕ್ರಿಯ ರಾಜಕೀಯ ತ್ಯಜಿಸಿದ ಮೆಟ್ರೋ ಮ್ಯಾನ್ ಖ್ಯಾತಿಯ ಇ.ಶ್ರೀಧರನ್

ಮಲ್ಲಪ್ಪುರಂ: ಮೆಟ್ರೋಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರಿದ ಒಂದು ವರ್ಷದೊಳಗೆ ಸಕ್ರಿಯ ರಾಜಕೀಯವನ್ನು, ತೊರೆದಿದ್ದಾರೆ.ನನಗೆ ಈಗ ರಾಜಕೀಯದ ಕನಸು ಇಲ್ಲ. ನನ್ನ ನೆಲದ ಸೇವೆ ಮಾಡಲು ನನಗೆ ರಾಜಕೀಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

“ನಾನು ಎಂದಿಗೂ ರಾಜಕಾರಣಿಯಾಗಿರಲಿಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿಲ್ಲ ಎಂದರೆ ನಾನು ರಾಜಕೀಯವನ್ನು ಬಿಟ್ಟುಬಿಡುತ್ತೇನೆ ಎಂದು ಅರ್ಥವಲ್ಲ. ನನಗೆ ಈಗ 90 ವರ್ಷ.. . ನಾನು ಈಗಾಗಲೇ ಮೂರು ಟ್ರಸ್ಟ್‌ಗಳ ಮೂಲಕ ಅದನ್ನು ಮಾಡಿದ್ದೇನೆ” ಎಂದು ಶ್ರೀಧರನ್ ಹೇಳಿದರು.

ಶ್ರೀಧರನ್ ಅವರು ಗುರುವಾರ ಕೇರಳದ ಮಲಪ್ಪುರಂನಲ್ಲಿ ಈ ಕುರಿತು ಘೋಷಿಸಿದರು. ಎಪ್ರಿಲ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಿನಿಂದ ಪಾಠ ಕಲಿತಿದ್ದೇನೆ ಎಂದು ಹೇಳಿದರು.

ಇ.ಶ್ರೀಧರನ್ ಅವರು ಪಾಲಕ್ಕಾಡ್ ಕ್ಷೇತ್ರದಲ್ಲಿ ಹಾಲಿ ಶಾಸಕ ಶಾಫಿ ಪರಂಬಿಲ್ ವಿರುದ್ಧ 3,859 ಮತಗಳಿಂದ ಸೋತಿದ್ದಾರೆ. ಕೇರಳದಲ್ಲಿ ಕನಿಷ್ಠ 35 ಸ್ಥಾನಗಳಲ್ಲಿ ಗೆಲುವಿನ ಆಸೆಯಿಂದ ಎಪ್ರಿಲ್ 2 ರ ಅಸೆಂಬ್ಲಿ ಚುನಾವಣೆಯಲ್ಲಿ ಹೋರಾಡಿದ ಬಿಜೆಪಿ-ಎನ್‌ಡಿಎ ತನ್ನ ಏಕೈಕ ಸ್ಥಾನವಾದ ನೆಮೊಮ್ ಅನ್ನು ಉಳಿಸಿಕೊಳ್ಳಲೂ ವಿಫಲವಾಗಿತ್ತು. ‘ಮೆಟ್ರೋಮ್ಯಾನ್’ ಶ್ರೀಧರನ್ ಹಾಗೂ ಪಕ್ಷದ ರಾಜ್ಯ ಮುಖ್ಯಸ್ಥ ಕೆ ಸುರೇಂದ್ರನ್ ಸೇರಿದಂತೆ ಅದರ ಎಲ್ಲಾ ಪ್ರಮುಖ ಸ್ಪರ್ಧಿಗಳು ಸೋತಿದ್ದರು.

Swathi MG

Recent Posts

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

9 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

11 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

23 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

30 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

47 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

1 hour ago