News Karnataka Kannada
Friday, May 03 2024
ಕೇರಳ

ಹೋಟೆಲ್‌ನಲ್ಲಿ ವಿವಾಹಿತ ಸ್ನೇಹಿತನೊಂದಿಗೆ ತಂಗಿದ್ದ ಯುವತಿ ನಿಗೂಢ ಸಾವು

Dead Body
Photo Credit :

ತಿರುವನಂತಪುರಂ : ವಿವಾಹಿತ ಸ್ನೇಹಿತನೊಂದಿಗೆ ತಂಪನೂರಿನಲ್ಲಿರುವ ಹೋಟೆಲ್‌ ನಲ್ಲಿ ತಂಗಿದ್ದ 23 ವರ್ಷದ ಯುವತಿಯೊಬ್ಬರು ಶನಿವಾರ ತಡರಾತ್ರಿ ಹೋಟೆಲ್ ನ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ನಿಗೂಢವಾಗಿ ಮೃತಪಟ್ಟ ಯುವತಿ ಕಟ್ಟಕ್ಕಡ ಸಮೀಪದ ವೀರನಕಾವು ನಿವಾಸಿ ಗಾಯತ್ರಿ ಎಂದು ಗುರುತಿಸಲಾಗಿದ್ದು, ಆಕೆಯ ಜೊತೆಗಿದ್ದ ಪರವೂರು ಮೂಲದ ಪ್ರವೀಣ್ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶನಿವಾರ ಮಧ್ಯಾಹ್ನ ಇಬ್ಬರೂ ಹೋಟೆಲ್‌ನಲ್ಲಿ ರೂಂ ಮಾಡಿಕೊಂಡಿದ್ದರು. ಹೋಟೆಲ್ ಸಿಬ್ಬಂದಿಗೆ ಪ್ರವೀಣ್‌ನಿಂದ ಕರೆ ಬಂದಿದ್ದು, ಮಧ್ಯರಾತ್ರಿಯ ವೇಳೆಗೆ ತನ್ನ ಗೆಳತಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಹೋಟೆಲ್ ಸಿಬ್ಬಂದಿ ತಕ್ಷಣ ಕೊಠಡಿಯನ್ನು ಪರಿಶೀಲಿಸಿದಾಗ ಬಾಯಿಂದ ನೊರೆ ಬಂದು ಮಹಿಳೆ ಸಾವನ್ನಪ್ಪಿರುವುದು ಕಂಡು ಬಂದಿದೆ.

ಅಷ್ಟರಲ್ಲಿ ಆ ವ್ಯಕ್ತಿ ಹೋಟೆಲ್ ನಿಂದ ನಾಪತ್ತೆಯಾಗಿದ್ದಾರೆ. ಇವರಿಬ್ಬರು ನಗರದ ಆಭರಣ ಮಳಿಗೆಯೊಂದರಲ್ಲಿ ಉದ್ಯೋಗಿಗಳಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಮದುವೆಯಾಗಿರುವ ಪ್ರವೀಣ್ ಗಾಯತ್ರಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ವಿಚಾರವಾಗಿ ಪ್ರವೀಣ್ ಕುಟುಂಬದಲ್ಲಿ ಜಗಳವಾಗಿತ್ತು. ಫೋರೆನ್ಸಿಕ್ ತಜ್ಞರು ಹೋಟೆಲ್ ಕೊಠಡಿಗೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದ್ದಾರೆ. ಗಾಯತ್ರಿ ವಿಷ ಸೇವಿಸಿ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು