News Karnataka Kannada
Monday, April 29 2024
ಕೇರಳ

ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಜೀಪ್: 9 ಸಾವು

9 killed as jeep falls into gorge
Photo Credit : IANS

ವಯನಾಡ್: ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಜೀಪ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದು 9 ಮಂದಿ ಸಾವಿಗೀಡಾಗಿರುವ ಘಟನೆ ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ನಡೆದಿದೆ. ಜೀಪಿನಲ್ಲಿ 12 ಮಂದಿ ಇದ್ದರು. ಗಾಯಗೊಂಡ ಮೂವರನ್ನು ವಯನಾಡ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಚಾಲಕ ಸೇರಿದಂತೆ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ ಎಂದು ವಯನಾಡ್ ಕಲೆಕ್ಟರ್ ರೇಣು ರಾಜ್ ಖಚಿತಪಡಿಸಿದ್ದಾರೆ. ಜೀಪ್ ಆಳವಾದ ಕಂದಕಕ್ಕೆ ಬಿದ್ದು ಸಂಪೂರ್ಣ ಜಖಂಗೊಂಡಿದೆ.

ಸುಮಾರು 30 ಮೀಟರ್ ಆಳಕ್ಕೆ ಬಿದ್ದಿದ್ದು, ಸ್ಥಳೀಯರ ನೇತೃತ್ವದಲ್ಲಿ ಮೊದಲ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು