ಕೊಚ್ಚಿ: ವ್ಯಕ್ತಿಯೋರ್ವನ ಶ್ವಾಸಕೋಶದಲ್ಲಿದ್ದ 4 ಸೆಂಟಿ ಮೀಟರ್ ಉದ್ದದ ಜಿರಳೆಯನ್ನು, ವೈದ್ಯರು ಹೊರತೆಗೆದಿದ್ದಾರೆ.
ಈ ಘಟನೆ ಕೊಚ್ಚಿಯ ಅಮೃತಾ ಆಸ್ಪತ್ರೆಯಲ್ಲಿ ನಡೆದಿದೆ. ಕೇರಳದ 55 ವರ್ಷದ ವ್ಯಕ್ತಿಯೊಬ್ಬರಿಗೆ ಉಸಿರಾಡುವಾಗ ಸಮಸ್ಯೆ ಆಗುತಿತ್ತು ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಪರೀಕ್ಷಿಸಿಕೊಂಡಿದ್ದಾರೆ. ಈ ವೇಳೆ ಜಿರಳೆ ಇರುವುದು ಪತ್ತೆಯಾಗಿದೆ. ನಂತರ ಜಿರಳೆ ಹೊರಬರುವುದಕ್ಕಾಗಿ ಚಿಕಿತ್ಸೆ ನೀಡಲು ಆರಂಭಿಸಿದಾಗ ಜಿರಳೆ ಅಲ್ಲಿಯೇ ವಿಭಜನೆಯಾಗಿದ್ದು, ಇದು ರೋಗಿಯ ಆರೋಗ್ಯವನ್ನು ಮತ್ತಷ್ಟು ಕೆಡಿಸಿತ್ತು. ನಂತರ ವೈದ್ಯರು ಸತತ ಎಂಟು ಗಂಟೆಗಳ ಕಾಲ ನಿರಂತರ ಪ್ರಯತ್ನ ಮಾಡಿ ವ್ಯಕ್ತಿಯ ಶ್ವಾಸಕೋಶದಲ್ಲಿದ್ದ ಜಿರಳೆಯನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.