News Karnataka Kannada
Sunday, May 05 2024
ಕೇರಳ

ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ, ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶ

African swine flu: District collector orders killing of pigs
Photo Credit : Pixabay

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಕಣಿಚಾರ್‌ ನಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾಗಿದೆ. ಮಲೆಯಂಪಾಡಿಯಲ್ಲಿರುವ ಫಾರ್ಮ್‌ ಒಂದರಲ್ಲಿ ಹಂದಿ ಜ್ವರ ಪತ್ತೆಯಾಗಿದ್ದನ್ನು ಪಶುಸಂಗೋಪನೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಇದಾದ ಬಳಿಕ ಅಲ್ಲಿಂದ ಹತ್ತು ಕಿಲೋಮೀಟರ್‌ ವ್ಯಾಪ್ತಿಯಲ್ಲಿರುವ ಇನ್ನೊಂದು ಫಾರ್ಮ್‌ನಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಅಲ್ಲದೆ ಕೊಂದ ಹಂದಿಗಳನ್ನು ಹೂಳುವಂತೆ ಆದೇಶ ನೀಡಿದ್ದಾರೆ. ಹಂದಿ ಸಾಕಣೆ ಪ್ರದೇಶದಿಂದ ಒಂದು ಕಿಲೋಮೀಟರ್‌ ಪ್ರದೇಶವನ್ನು ಸೊಂಕು ಪತ್ತೆ ಪ್ರದೇಶವೆಂದು ಗುರುತಿಸಿದ್ದು, 10 ಕಿಲೋಮೀಟರ್‌ ವ್ಯಾಪ್ತಿಯನ್ನು ಕಣ್ಗಾವಲು ಪ್ರದೇಶ ಎಂದು ಗುರುತಿಸಲಾಗಿದೆ. ಈ ಪ್ರದೇಶದಲ್ಲಿ ಹಂದಿ ಮಾಂಸ ವಿತರಣೆ, ಮಾರಾಟವನ್ನು 3 ತಿಂಗಳ ಕಾಲ ನಿಷೇಧಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು