ಕೇರಳ : ರಾಜ್ಯದಲ್ಲಿ ಬಿಜೆಪಿಯ ಕೋಮುವಾದಿ ರಾಜಕಾರಣವನ್ನು ಬೇರೂರಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಬಿಜೆಪಿಯು ಒಂದೇ ಒಂದು ಸ್ಥಾನವನ್ನೂ ಗೆಲ್ಲುವುದಿಲ್ಲ ಹಾಗೂ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಉದ್ದೇಶದಿಂದಲೇ ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ ಎಂದರು.
ಈ ಚುನಾವಣೆ ದೇಶದ ಭವಿಷ್ಯವನ್ನು ನಿರ್ಧರಿಸಲಿದೆ. ದೇಶದಲ್ಲಿ ಅಪಾಯಕಾರಿ ನೀತಿಗಳನ್ನು ಜಾರಿಗೊಳಿಸುತ್ತಿರುವ ಬಿಜೆಪಿ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯಲು ಮತ ಕೇಳುತ್ತಿದ್ದೇವೆ. ರಾಷ್ಟ್ರೀಯ ಮಟ್ಟದಲ್ಲಿಯೂ ಬಿಜೆಪಿ ವಿರೋಧಿ ರಂಗದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದೇವೆ ಎಂದು ವಿಜಯನ್ ತಿಳಿಸಿದ್ದಾರೆ.