ಶಬರಿಮಲೆ: ಕೇರಳದ ವಯನಾಡ್ ಮೂಲದ ಶತಾಯುಷಿಯೊಬ್ಬರು 41 ದಿನಗಳ ಕಠಿಣ ವ್ರತ ಕೈಗೊಂಡು ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ತಮ್ಮ ಹರಕೆಯನ್ನು ತೀರಿಸಿದ್ದಾರೆ.
ಶತಾಯುಷಿ ವಯನಾಡಿನ ಮೂನ್ನನಕುಜಿಯ ಪಾರುಕುಟ್ಟಿಯಮ್ಮ 41 ದಿನಗಳ ವ್ರತವನ್ನು ಮಾಡಿ ತನ್ನ ಮಕ್ಕಳು ಹಾಗೂ ಮೊಮ್ಮಕಳೊಂದಿಗೆ ಬೆಟ್ಟದ ದೇಗುಲ ಶಬರಿಮಲೆಗೆ ತನ್ನ ಚೊಚ್ಚಲ ಯಾತ್ರೆ ಕೈಗೊಂಡಿದ್ದಾರೆ. ನೂರು ವರ್ಷದ ಮಹಿಳೆಯೊಬ್ಬರು ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಚೊಚ್ಚಲ ಭೇಟಿ ನೀಡಿದ್ದರಿಂದ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.
ಮೊದಲ ಬಾರಿಗೆ ಶಬರಿಮಲೆ ಯಾತ್ರೆ ಕೈಗೊಂಡ ಪಾರುಕುಟ್ಟಿಯಮ್ಮ ದಾರಿಯುದ್ದಕ್ಕೂ, ಕಡಂಪುಳ, ಗುರುವಾಯೂರ್, ವೈಕೋಮ್ ಮತ್ತು ಎಟ್ಟುಮನೂರ್ ಮುಂತಾದ ದೇವಾಲಯಗಳಲ್ಲಿ ದರ್ಶನ ಪಡೆದು ಶಬರಿಮಲೆ ತಲುಪಿದ್ದಾರೆ.
ಪಾರುಕುಟ್ಟಿಯಮ್ಮ ಆಗಮಿಸಿದ ಸುದ್ದಿ ತಿಳಿದ ದೇವಸ್ವಂ ಮಂಡಳಿಯವರು ಆಕೆಗೆ ಪೊನ್ನಡ (ಚಿನ್ನದ ದಾರದಿಂದ ನೇಯ್ದ ಬಟ್ಟೆ) ನೀಡಿ ಗೌರವಿಸಿದ್ದಾರೆ.
ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…