News Karnataka Kannada
Monday, April 29 2024
ಕೇರಳ

ಕೊಚ್ಚಿಯಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ, ಓರ್ವನಿಗೆ ಗಾಯ

ಕೀನ್ಯಾದ ರಾಜಧಾನಿ ನೈರೋಬಿಯಿಂದ 400 ಕಿಲೋಮೀಟರ್ ದೂರದ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. 
Photo Credit : IANS

ಕೊಚ್ಚಿ: ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಕೊಚ್ಚಿಯ ನೆಡುಂಬಾಶ್ಶೇರಿ ವಿಮಾನ ನಿಲ್ದಾಣದ ರನ್ ವೇ ಬಳಿ ಅಪಘಾತಕ್ಕೀಡಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿದ್ದ ಹೆಲಿಕಾಪ್ಟರ್ ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೂಡಲೇ ಅಪಘಾತಕ್ಕೀಡಾಗಿದೆ.

ಹೆಲಿಕಾಪ್ಟರ್ನಲ್ಲಿ ಮೂವರು ಇದ್ದರು, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೋಸ್ಟ್ ಗಾರ್ಡ್ ಅಧಿಕಾರಿ ಸುನಿಲ್ ಲೋಟ್ಲಾ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮಧ್ಯಾಹ್ನ 12.25 ಕ್ಕೆ ಅಪಘಾತ ಸಂಭವಿಸಿದ್ದು, ಕೋಸ್ಟ್ ಗಾರ್ಡ್ನ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಕೊಚ್ಚಿನ್ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (ಸಿಐಎಎಲ್) ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ರನ್ ವೇಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಮತ್ತು ಒಮಾನ್ ನಿಂದ ಬರುವ ವಿಮಾನವನ್ನು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಎರಡೂವರೆ ಗಂಟೆಗಳ ಕಾಲ ರನ್ ವೇಯನ್ನು ಮುಚ್ಚುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

ಅಪಘಾತದಲ್ಲಿ ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು